Screen Reader Access                 A-  A  A+ 
ಶ್ರೀ ಭಗಂಡೇಶ್ವರ ದೇವಾಲಯ, ಭಾಗಮಂಡಲ, ಕೊಡಗು - 571247, ಕೊಡಗು .
Sri Bhagandeshwara Temple, Bhagamandala, Kodagu - 571247, Kodagu District [TM000087]
×
Temple History

ಸಾಹಿತ್ಯದ ಹಿನ್ನೆಲೆ

ಭಾಗಮಂಡಲ ಕ್ಷೇತ್ರಕ್ಕೆ ಭಗಂಡಕ್ಷೇತ್ರ ಎಂಬ ಹೆಸರು ಪುರಾಣ ಪ್ರಸಿದ್ಧವಾಗಿರುತ್ತದೆ. ಇಲ್ಲಿ ಶ್ರೀ ಭಗಂಡೇಶ್ವರ, ಶ್ರೀ ಸುಬ್ರಹ್ಮಣ್ಯ ಮತ್ತು ಶ್ರೀ ಮಹಾವಿಷ್ಣು ದೇಗುಲಗಳಿವೆ. ಶ್ರೀ ಮಹಾಗಣಪತಿ ಸನ್ನಿಧಿಯು ದೇಗುಲದ ಹೊರಾಂಗಣದಲ್ಲಿದೆ. ಹಿಂದೆ ಭಗಂಡರೆಂಬ ಮುನಿವರ್ಯರು ಇಲ್ಲಿ ವಾಸವಾಗಿದ್ದು, ಷಣ್ಮುಖಸ್ವಾಮಿಯನ್ನು ಕುರಿತು ತಪಸ್ಸು ಮಾಡಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ. ಶ್ರೀ ಸುಬ್ರಹ್ಮಣ್ಯಸ್ವಾಮಿಯ ದಿವ್ಯ ನೆಲೆಯಾಗಿದ್ದು ಸ್ಕಾಂದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದಿದ್ದ ಇಂದಿನ ಭಾಗಮಂಡಲದ ಭೂಭಾಗವನ್ನು, ಭಗಂಡಋಷಿಗಳ ಮೇಲೆ ಸುಪ್ರೀತರಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯು ಅನುಗ್ರಹಪೂರ್ವಕವಾಗಿ ಅವರಿಗೆ ಕೊಡುಗೆಯಾಗಿ ನೀಡುತ್ತಾರೆ. ಋಷಿಗಳ ಪರಮಪಾವನವಾದ ತಪೋಭೂಮಿ ಹಾಗೂ ದೇವನೆಲೆಯಾದ ಸ್ಕಾಂದಕ್ಷೇತ್ರದಲ್ಲಿ ಸರ್ವಜೀವರ ಕ್ಷೇಮಕ್ಕಾಗಿ ಶಿವಲಿಂಗವೊಂದನ್ನು ಭಗಂಡಮಹರ್ಷಿಗಳು ಪ್ರತಿಷ್ಠಾಪಿಸುತ್ತಾರೆ. ಭಗಂಡ ಋಷಿಯು ನೆಲೆಸಿ ತಪಸ್ಸನ್ನು ಮಾಡಿ ಷಣ್ಮುಖ ಸ್ವಾಮಿಯಿಂದ ಅನುಗ್ರಹವಾಗಿ ಪಡೆದ ಕ್ಷೇತ್ರವಾದ್ದರಿಂದ ಭಗಂಡ ಕ್ಷೇತ್ರವೆಂದು ಹೆಸರಾಯಿತು. ಅದೇ ಹೆಸರು ಮುಂದೆ...