ಸುಮಾರು ೮೦೦ ವರ್ಷಗಳ ಹಿಂದೆ ಈ ಪ್ರದೇಶದ ಸಮೀಪದಲ್ಲಿ ರಾಜವಂಶಕ್ಕೊಳಪಟ್ಟ ದೇವಾಲಯವು ಸಂಗ್ರಾಮವೊAದರಲ್ಲಿ ಅರಸೊತ್ತಿಗೆ ನಾಶವಾಗಿ ದೇವಾಲಯ ಧ್ವಂಸವಾಗಿತ್ತು. ಈ ದೇವಾಲಯದಲ್ಲಿ ಪೂಜಿಸಲಾಗುತ್ತಿದ್ದ ಈ ಗಣಪತಿ ವಿಗ್ರಹವು ದನಗಳನ್ನು ಕಾಯುತ್ತಿದ್ದ ಗೋಪಾಲ ಬಾಲಕರಿಗೆ ಗೋಚರವಾಯ್ತು. ಈ ಬಾಲಕರೆಲ್ಲರೂ ಸೇರಿಕೊಂಡು ಗಣಪತಿ ವಿಗ್ರಹವನ್ನು ಎತ್ತಿಕೊಂಡು ದಾರಿಯುದ್ದಕ್ಕೂ ಭಜನೆ ಪೂಜೆಗಳನ್ನು ಮಾಡುತ್ತಾ ಈಗ ಇರುವ ಮರದ ಬುಡದಲ್ಲಿ ಕಾಟುಕಲ್ಲುಗಳ ಮಧ್ಯೆ ಇಟ್ಟು ತಾವು ಬೆಳೆಸುತ್ತಿರುವ ಸೌತೆ ಮಿಡಿಗಳನ್ನು ಪ್ರತಿ ದಿನ ನೈವೇದ್ಯವನ್ನಾಗಿ ಅರ್ಪಿಸಿ ಭಜನೆ ಪೂಜೆಗಳನ್ನು ಮಾಡತೊಡಗಿದರು. ಅಂದಿನಿAದ ಈ ಕ್ಷೇತ್ರಕ್ಕೆ ಸೌತಡ್ಕ ಎಂದು ಹೆಸರು ಬಂತು.