ಶ್ರೀಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನವು ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕು, ವಂದಾರಗುಪ್ಪೆ ಗ್ರಾಮದ ಹೊರಭಾಗದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಇದೆ. ಬೆಂಗಳೂರಿನಿಂದ 55 ಕಿ.ಮೀ. ದೂರ, ಮೈಸೂರಿನಿಂದ 85 ಕಿ.ಮೀ.ದೂರದಲ್ಲಿದೆ. ರಾಮನಗರ ಜಿಲ್ಲಾ ಕೇಂದ್ರದಿಂದ 6 ಕಿ.ಮೀ. ಮತ್ತು ಚನ್ನಪಟ್ಟಣ ತಾಲ್ಲೂಕು ಕೇಂದ್ರದಿಂದ 5 ಕಿ.ಮೀ.ದೂರದಲ್ಲಿದೆ. ಶ್ರೀಕೆಂಗಲ್ ಆಂಜನೇಯಸ್ವಾಮಿ ದೇವಾಲಯವು ಶ್ರೀಮಹರ್ಷಿ ಕಣ್ವ ಮುನಿಗಳಿಂದ ಆರಾಧಿಸಲ್ಪಟ್ಟ ದೇವಾಲಯವೆಂದು ಜನಜನಿತವಾಗಿದೆ. ಈ ದೇವಾಲಯವು ಕ್ರಿ.ಶ. ಸುಮಾರು 12ನೇ ಶತಮಾನಕ್ಕೆ ಸೇರಿದ ಪುರಾತನ ದೇವಾಲಯ ಎಂಬುದು ನಂಬಿಕೆಯಾಗಿದೆ. ಈ ಬಗ್ಗೆ ಯಾವುದೇ ಐತಿಹಾಸಿಕ ಅಥವಾ ಪೌರಾಣಿಕ ದಾಖಲೆಗಳು ಲಭ್ಯವಿರುವುದಿಲ್ಲ. ಶ್ರೀ ವ್ಯಾಸರಾಯರಿಂದ ಆರಾಧಿಸಲ್ಪಟ್ಟ ಶ್ರೀಕೆಂಗಲ್ ಆಂಜನೇಯಸ್ವಾಮಿ ದೇವಾಲಯವು ಅಯ್ಯನಗುಡಿ ಎಂದೇ ಪ್ರಖ್ಯಾತಿಯನ್ನು ಪಡೆದಿದೆ. ಪ್ರತಿ ನಿತ್ಯ ಸಾವಿರಾರು ಭಕ್ತರು ಆಗಮಿಸುವ ಶ್ರೀಕ್ಷೇತ್ರದ ಸ್ವಾಮಿಯವರು...
| 06:30 AM IST - 08:30 PM IST | |
| 04:00 PM IST - 08:30 PM IST | |
| 02:00 PM IST - 04:00 PM IST | |
| ಶ್ರೀದೇವಾಲಯದಲ್ಲಿ ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಮತ್ತು 04.00 ಗಂಟೆಯಿಂದ ರಾತ್ರಿ 8.30 ಗಂಟೆಯವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ವಾರದ ಪ್ರತಿ ಶನಿವಾರ ಮತ್ತು ಭಾನುವಾರದ ದಿನಗಳಲ್ಲಿ ಬೆಳಿಗ್ಗೆ 7-00 ಗಂಟೆಯಿಂದ ರಾತ್ರಿ 8-30 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. | |